ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೊಳಿಸಬೇಕು ಎಂಬ ಆಗ್ರಹವನ್ನು ಮುಂದಿಟ್ಟು, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ 7ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದ್ದು, ಅದು ಕೇರಳ, ತಮಿಳುನಾಡು, ಪುದುಚೇರಿ ಮೂಲಕ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಿದರು. ಜಾಥಾ ಸಾಗುವ ಮಾರ್ಗದಾದ್ಯಂತ ರೈತರಿಂದ ಸಹಿ ಸಂಗ್ರಹಿಸಿ, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಲಾಗುವುದು ಎಂದರು.
ಮಾರ್ಚ್ 19ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದ್ದು, ಸಮಾವೇಶದ ನಂತರ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪ್ರಸ್ತುತ ಎಂಎಸ್‌ಪಿ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಕೃಷಿ ಉತ್ಪನ್ನಗಳು ಮಾರಾಟವಾಗುತ್ತಿರುವುದರಿಂದ, ರೈತರಿಗೆ ವರ್ಷಕ್ಕೆ ಸರಿಸುಮಾರು 15 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿದೆ. ಈ ಗಂಭೀರ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲು ಈ ಜಾಥಾ ಮತ್ತು ಸಮಾವೇಶ ಪ್ರಮುಖವಾಗಲಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗೆ ಉಚಿತ LPG…