2025-26ನೇ ಸಾಲಿನ ಹಿಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ಆರು ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು(MSP) ಏರಿಕೆ ಮಾಡಿದೆ.ಪ್ರತಿ ಕ್ವಿಂಟಾಲ್ ಗೋಧಿಗೆ 150 ರೂಪಾಯಿ, ಬಾರ್ಲಿಗೆ 130 ರೂಪಾಯಿ, ಬೇಳೆಕಾಳುಗಳಿಗೆ 210 ರೂಪಾಯಿ, ಕುಸುಮೆಗೆ 140 ರೂಪಾಯಿ, ಮಸೂರು ಬೇಳೆಗೆ 275 ರೂಪಾಯಿ ಮತ್ತು ಸಾಸಿವೆಗೆ 300 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸರ್ಕಾರದ ಮೂರನೇ ಅವಧಿಯ ಮೊದಲ ಮೂರು ದಿನಗಳಲ್ಲಿ ರೈತರ ಪರ ಅನೇಕ ದೊಡ್ಡ ನಿರ್ಧಾರಗಳನ್ನುತೆಗೆದುಕೊಳ್ಳಲಾಗಿದೆ. ಈ ಪರಿವರ್ತನಾತ್ಮಕ ನಿರ್ಧಾರಗಳಿಂದ ಸಮಸ್ಯೆಗಳು ಕಡಿಮೆಯಾಗಿ ಆದಾಯ ಹೆಚ್ಚಲಿದೆ. ಅಲ್ಲದೆ, ವೈಜ್ಞಾನಿಕ ಮತ್ತು ತಾಂತ್ರಿಕ ನೆರವು ದೊರೆಯಲಿದೆ ಎಂದರು.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…