ಹಿಂಗಾರು ಹಂಗಾಮು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಅತಿವೃಷ್ಟಿಯಿಂದ ತತ್ತರಿಸಿರುವ ರೈತಾಪಿ ವರ್ಗದ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ 2026-27ನೇ ಸಾಲಿನ ಮಾರುಕಟ್ಟೆ ಋತುವಿಗಾಗಿ ಎಲ್ಲ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಅನುಮೋದನೆ ನೀಡಿದೆ. ಈ ಹಂಗಾಮಿನಲ್ಲಿ ಕುಸುಬೆಗೆ ಅತಿ ಹೆಚ್ಚು ಅಂದರೆ ಕ್ವಿಂಟಾಲ್ ಗೆ 600 ರೂಪಾಯಿ, ಮಸೂರ್ ಕ್ವಿಂಟಾಲ್ ಗೆ 300, ಸಾಸಿವೆ, ಕಡಲೆ, ಬಾರ್ಲಿ ಮತ್ತು ಗೋಧಿಗೆ ಕ್ರಮವಾಗಿ 250, 225, 170 ಮತ್ತು 160 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹಿಂಗಾರು ಮಾರುಕಟ್ಟೆ ಋತುವಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ 2018-19ರ ಕೇಂದ್ರ ಬಜೆಟ್ ಘೋಷಣೆಗೆ ಅನುಗುಣವಾಗಿದೆ. ದೇಶಾದ್ಯಂತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಬೆಲೆ ನಿಗದಿಪಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

