ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಬಾರಿಯ ಹವಾಮಾನದ ಕಾರಣಗಳಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ರೈತರಿಗೆ ತೀರಾ ಅನುಕೂಲಕರವಾಗಿದೆ. ಈಗಾಗಲೇ ತೆರೆಯಲಾದ ಇಂತಹ ಕೇಂದ್ರಗಳ ಬಗ್ಗೆ ರೈತರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…..ಮುಂದೆ ಓದಿ….
ಈ ಬಾರಿ ಚಂಡಮಾರುತ ಮತ್ತಿತರ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ರಾಗಿ ಇಳುವರಿಯಾಗಿಲ್ಲ. ತಮಗೆ ಅಗತ್ಯವಾದಷ್ಟನ್ನು ಇಟ್ಟುಕೊಂಡು ಉಳಿದಿದ್ದನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಕುಶಾಲ್ ಹೇಳುತ್ತಾರೆ. ಮೂರು ಎಕರೆಯಲ್ಲಿ ರಾಗಿ ಬೆಳೆದಿದ್ದು, 9 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ. ಇದರಿಂದ ತುಂಬಾ ಅನುಕೂಲವಾಗಿದೆ ಎನ್ನುತ್ತಾರೆ ರೈತ ರಾಮಪ್ಪ. ಈ ಬಾರಿ ಸಕಾಲಕ್ಕೆ ಮಳೆಯಾಗದ ಕಾರಣ ಉತ್ತಮ ಇಳುವರಿಯಾಗಿಲ್ಲ, ಆದಾಗ್ಯೂ, 20 ಕ್ವಿಂಟಾಲ್ ರಾಗಿ ನೀಡುತ್ತಿರುವುದಾಗಿ ಹೇಳುತ್ತಾರೆ ರೈತ ರಘುವೀರ್.