ಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭ

December 9, 2024
7:11 AM

ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ  ತಿಳಿಸಿದ್ದಾರೆ.

Advertisement
Advertisement
Advertisement
Advertisement

ಯಾದಗಿರಿ, ಸುರಪುರ, ಹುಣಸಗಿ ಹಾಗೂ ನಾಯ್ಕಲ್‌ನಲ್ಲಿ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಇದೇ ತಿಂಗಳ 31 ರ ವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜನವರಿ 1 ರಿಂದ ಖರೀದಿ ಆರಂಭಗೊಳ್ಳಲಿದೆ.  ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಾದ ಬೆಳೆಯ ಆಧಾರದಲ್ಲಿ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದು. ತಂತ್ರಾಂಶದಲ್ಲಿ ತಪ್ಪಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.  ಭತ್ತ ಸಾಮಾನ್ಯ ಪ್ರತಿ ಕ್ವಿಂಟಲ್‌ಗೆ 2300  ರೂಪಾಯಿ, ‘ಎ’ ಗ್ರೇಡ್ ಪ್ರತಿ ಕ್ವಿಂಟಲ್‌ಗೆ 2350 ರೂಪಾಯಿಯಂತೆ ಹಾಗೂ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್‌ಗೆ 3371  ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ 3421 ರೂಪಾಯಿಯಂತೆ ಖರೀದಿಸಲಾಗುವುದು.   ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಮತ್ತು ಎಕರೆಗೆ 10  ಕ್ವಿಂಟಲ್‌ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿ ಜೋಳ ಖರೀದಿಸಲಾಗುತ್ತದೆ. ಭತ್ತವನ್ನು ತಮ್ಮ ಚೀಲಗಳೊಂದಿಗೆ ಖರೀದಿ ಕೇಂದ್ರಕ್ಕೆ ನೀಡುವ ರೈತರಿಗೆ ಪ್ರತಿ ಚೀಲಕ್ಕೆ 6 ರೂಪಾಯಿ ಖರೀದಿ ಏಜೆನ್ಸಿಗಳು ಪಾವತಿಸಲಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror