ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ.
ಯಾದಗಿರಿ, ಸುರಪುರ, ಹುಣಸಗಿ ಹಾಗೂ ನಾಯ್ಕಲ್‌ನಲ್ಲಿ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಇದೇ ತಿಂಗಳ 31 ರ ವರೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜನವರಿ 1 ರಿಂದ ಖರೀದಿ ಆರಂಭಗೊಳ್ಳಲಿದೆ. ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಾದ ಬೆಳೆಯ ಆಧಾರದಲ್ಲಿ ರೈತರು ಮಾರಾಟಕ್ಕೆ ಹೆಸರು ನೋಂದಾಯಿಸಿ ಕೊಳ್ಳಬಹುದು. ತಂತ್ರಾಂಶದಲ್ಲಿ ತಪ್ಪಾಗಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಭತ್ತ ಸಾಮಾನ್ಯ ಪ್ರತಿ ಕ್ವಿಂಟಲ್‌ಗೆ 2300 ರೂಪಾಯಿ, ‘ಎ’ ಗ್ರೇಡ್ ಪ್ರತಿ ಕ್ವಿಂಟಲ್‌ಗೆ 2350 ರೂಪಾಯಿಯಂತೆ ಹಾಗೂ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್‌ಗೆ 3371 ರೂಪಾಯಿ, ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‌ಗೆ 3421 ರೂಪಾಯಿಯಂತೆ ಖರೀದಿಸಲಾಗುವುದು. ಎಕರೆಗೆ 25 ಕ್ವಿಂಟಲ್‌ನಂತೆ ಗರಿಷ್ಠ 50 ಕ್ವಿಂಟಾಲ್ ಭತ್ತ ಮತ್ತು ಎಕರೆಗೆ 10 ಕ್ವಿಂಟಲ್‌ನಂತೆ ಗರಿಷ್ಠ 150 ಕ್ವಿಂಟಲ್ ಬಿಳಿ ಜೋಳ ಖರೀದಿಸಲಾಗುತ್ತದೆ. ಭತ್ತವನ್ನು ತಮ್ಮ ಚೀಲಗಳೊಂದಿಗೆ ಖರೀದಿ ಕೇಂದ್ರಕ್ಕೆ ನೀಡುವ ರೈತರಿಗೆ ಪ್ರತಿ ಚೀಲಕ್ಕೆ 6 ರೂಪಾಯಿ ಖರೀದಿ ಏಜೆನ್ಸಿಗಳು ಪಾವತಿಸಲಿವೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…