ಗುಣಮಟ್ಟದ ಭತ್ತ, ರಾಗಿ, ಜೋಳದ ಉತ್ಪನ್ನಗಳನ್ನು ವಿಜಯನಗರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಸ್ಥಳೀಯ ಎಪಿಎಂಸಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ನೇರವಾಗಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದು ನೊಂದಾಯಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಲ್ ರಾಗಿಗೆ 4290 ರೂಪಾಯಿ ನಿಗದಿ ಪಡಿಸಿದ್ದು, ತುಮಕೂರು ಜಿಲ್ಲೆಯ ವಿವಿಧೆಡೆ 10 ಖರೀದಿ ಕೇಂದ್ರ ಸ್ಥಾಪಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕುಣಿಗಲ್ ತಾಲ್ಲೂಕಿನಲ್ಲಿ 2, ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಗುಬ್ಬಿ ತಾಲ್ಲೂಕು ಹಾಗೂ ಹುಳಿಯಾರಿನಲ್ಲಿ ತಲಾ ಒಂದು ಸೇರಿ ಒಟ್ಟು 10 ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲಾಗುತ್ತದೆ. ರಾಗಿ ಖರೀದಿಗೆ ಡಿಸೆಂಬರ್ 1 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…