ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಷೇಧ ಹಿನ್ನೆಲೆ | ಗಣಿಗಾರಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು | ಅಧ್ಯಯನ ವರದಿಗೆ ಸಮಯ ಕೇಳಿದ ಅಣೆಕಟ್ಟು ಸುರಕ್ಷತಾ ಸಮಿತಿ

August 1, 2024
12:17 PM

ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.

Advertisement
ಕೃಷ್ಣರಾಜ ಸಾಗರ ಅಣೆಕಟ್ಟು (KRS) ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಸುರಕ್ಷತೆ ವಿಚಾರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕನಿಷ್ಠ 4 ತಿಂಗಳು ಕಾಲಾವಕಾಶ ಬೇಕು ಎಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೈಕೋರ್ಟ್‌ಗೆ ತಿಳಿಸಿದೆ. ನ್ಯಾಯಾಲಯದ ಆದೇಶದಂತೆ ಕೆಆರ್‌ಎಸ್ ಸುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಮತ್ತು ಸಿಮೀತ ಗಣಿ ಚಟುವಟಿಕೆಗಳಿಗೆ ಷರತ್ತುಗಳನ್ನು ವಿಧಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ ‘ಪ್ರಾಯೋಗಿಕ ಸ್ಫೋಟ’ (ಟ್ರಯಲ್ ಬ್ಲಾಸ್ಟ್​​) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು ‘ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್’ ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.

– ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group