ಕೆಆರ್‌ಎಸ್ ಸುತ್ತ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿರುವ ಕಾರಣ ಅಣೆಕಟ್ಟು ಸುರಕ್ಷತೆ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕಾಲಾವಕಾಶ ಬೇಕೆಂದು ರಾಜ್ಯಮಟ್ಟದ ಅಣೆಕಟ್ಟು ಸುರಕ್ಷತಾ ಸಮಿತಿ ಹೇಳಿದೆ.
ಸರ್ಕಾರದ ಪರ ವಕೀಲ ಎಸ್.ಎಸ್.ಮಹೀಂದ್ರ ವಾದ ಮಂಡಿಸಿ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ವಿಚಾರವಾಗಿ ಹಾಗೂ ‘ಪ್ರಾಯೋಗಿಕ ಸ್ಫೋಟ’ (ಟ್ರಯಲ್ ಬ್ಲಾಸ್ಟ್) ವಿಧಾನದ ಮೂಲಕ ಪರಿಶೀಲಿಸುವ ಬದಲು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಯು ‘ಮ್ಯಾಥಮ್ಯಾಟಿಕಲ್ ಮೊಡಾಲಿಟಿ ಆಂಡ್ ಪ್ರಾಪರ್ ವ್ಯಾಲಿಡೇಷನ್’ ವಿಧಾನದ ಮೂಲಕ ವೈಜ್ಞಾನಿಕವಾಗಿ ಸಮಗ್ರ ವಿಶ್ಲೇಷಣೆ ಮಾಡುತ್ತಿದೆ. ಇದಕ್ಕಾಗಿ ಸಮಯ ಹಿಡಿಯುತ್ತದೆ. ಆದ್ದರಿಂದ ಕನಿಷ್ಠ ನಾಲ್ಕು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿಗೆ 4 ತಿಂಗಳ ಕಾಲ ಸಮಯ ನೀಡಿ, ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿತು. ಇದೇ ವೇಳೆ, ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಗಣಿ ಚಟುವಟಿಕೆಗಳನ್ನು ನಿಷೇಧಿಸಿ ಹೊರಡಿಸಲಾದ ಆದೇಶ ಮಾರ್ಪಾಡು ಮಾಡಬೇಕು. ಹಾಗೂ ಗಣಿ ಚಟುವಟಿಕೆ ನಿಷೇಧಿಸಿ ಹೊರಡಿಸಿದ ಆದೇಶದಲ್ಲಿ ಸಮಿತಿಯ ವರದಿ ಬರುವವರೆಗೆ ಪರಿವರ್ತಿತ ಜಮೀನಿನಲ್ಲಿ ಗಣಿ ಉದ್ದೇಶಿತ ಬಳಕೆಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ವಿಧಿಸಿದ್ದ ಷರತ್ತು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಮಧ್ಯಂತರ ಅರ್ಜಿಗಳನ್ನು ನ್ಯಾಯಪೀಠ ಇತ್ಯರ್ಥಪಡಿಸಿತು. ಅಲ್ಲದೆ, ಎಲ್ಲಾ ಮಧ್ಯಂತರ ಅರ್ಜಿದಾರರು ರಾಜ್ಯ ಅಣೆಕಟ್ಟು ಸುರಕ್ಷತಾ ಸಮಿತಿ ಮುಂದೆ ಮನವಿ ಸಲ್ಲಿಸಬಹುದು ಎಂದು ಹೇಳಿದೆ.
– ಅಂತರ್ಜಾಲ ಮಾಹಿತಿ
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.