ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ.ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು.ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ,ಯಾವುದೇ ಅನಗತ್ಯ ತಂಟೆ,ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜನರ ಮನೆ ಬಾಗಿಲಿಗೆ ತಲುಪಲಿದೆ ಆಸ್ತಿ ಖಾತೆ ಹಕ್ಕು| ಸಚಿವ ಆರ್ . ಅಶೋಕ್"