ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.…..ಮುಂದೆ ಓದಿ….
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿಹಾನಿ, ಬೆಳೆ ಹಾನಿ, ಜೀವಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮಘಟ್ಟಕ್ಕೆ ತೊಂದರೆಯಾದರೆ ಮುಂಬರುವ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60 ರಷ್ಟು ಅರಣ್ಯ ಪ್ರದೇಶವಿದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…