ಸುದ್ದಿಗಳು

ಕಾಲುವೆಯ ದುರಸ್ತಿ ಕೆಲಸ | ಕಾಮಗಾರಿ ಸ್ಥಳದಲ್ಲಿಯೇ ಮಲಗಿದ ಸಚಿವ ರಾಮುಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದರು. 

Advertisement

ಭದ್ರಾ ನದಿ ಮತ್ತು ವಾಣಿವಿಲಾಸ ಸಾಗರ ಪಾತ್ರದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ವೇದಾವತಿ ನದಿಗೆ ಹರಿಸಲಾಗಿದೆ. ಕರ್ನಾಟಕ ಮತ್ತು ಆಂಧ್ರ ಗಡಿಭಾಗಕ್ಕೆ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆಯಲ್ಲಿ ಒಟ್ಟು 58 ಪಿಲ್ಲರ್​ಗಳಿದ್ದು, 10ನೇ ಪಿಲ್ಲರ್ ದುರಸ್ತಿಗೊಂಡಿದೆ. 15 ನೇ ಪಿಲ್ಲರ್ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಎಲ್‍ಎಲ್‍ಸಿ ಕಾಲುವೆ ದುರಸ್ತಿಗೆ ಒಳಗಾಗಿದ್ದು, ರೈತರ ಬೆಳೆಗಳಿಗೆ ನೀರು ಒದಗಿಸಲು ಈಗ ತಾತ್ಕಾಲಿಕವಾದ ಪಿಲ್ಲರ್ ನಿರ್ಮಾಣ ಮಾಡಲಾಗುತ್ತಿದೆ.

ಕಾಲುವೆಯ ಮೂಲಕ ತಮ್ಮ ಜಮೀನುಗಳಿಗೆ ನೀರು ಪಡೆಯುವ ರೈತರು, ಲಕ್ಷಾಂತರ ಎಕರೆ ಬೆಳೆ ಹಾನಿಗೀಡಾಗುವ ಭೀತಿಯಲ್ಲಿದ್ದಾರೆ.ಕಾಲುವೆಯ ಸೇತುವೆಯ ಸ್ಥಂಬ ಕುಸಿದಿದ್ದರಿಂದ ಕೆಳಭಾಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೈತರು ಬೆಳೆದ ಭತ್ತ ಮತ್ತಿತರ ಬೆಳೆ ಒಣಗುತ್ತಿದೆ. ಹೀಗಾಗಿ, ಈ ಕಾಲುವೆ ರಿಪೇರಿ ತುರ್ತಾಗಿ ನಡೆಯಬೇಕು, ಕಾಮಗಾರಿ ಪೂರ್ಣಗೊಂಡ ನಂತರವೇ ಸ್ಥಳದಿಂದ ನಾನು ತೆರಳುವುದು, ಅಲ್ಲಿವರೆಗೆ ಇಲ್ಲಿಯೇ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಸ್ಥಳದಲ್ಲೇ ರಾತ್ರಿ ವಾಸ್ತವ್ಯ ಹೂಡಿದರು.

ಸೇತುವೆ ಪಿಲ್ಲರ್ ಮರು ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಕಾಲುವೆಗೆ ನೀರು ಹರಿಯುವುದನ್ನು ಅಧಿಕಾರಿಗಳು ಬಂದ್ ಮಾಡಿದ್ದರು. ಅಲ್ಲದೇ ಪಿಲ್ಲರ್ ನಿರ್ಮಣ ಕಾಮಗಾರಿ ವಿಳಂಬ ಹಿನ್ನಲೆ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಚಿವ ಶ್ರೀರಾಮುಲು ನಿನ್ನೆ ಮಧ್ಯಾಹ್ನ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ಕಾಮಗಾರಿ ಪೂರ್ಣ ಮುಗಿಯುವವರೆಗೂ ಕಾಮಗಾರಿ ಸ್ಥಳದಲ್ಲೇ ಇರಲು ನಿರ್ಧಾರ ಮಾಡಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

7 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

17 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

24 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago