ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕ ರೂಪ ಮಾರಾಟ ದರ 850 ರೂಪಾಯಿ ನಿಗದಿಪಡಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel