ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಸದ್ಯ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ ಇಲ್ಲ. ಕಲ್ಲಿದ್ದಲು ದಾಸ್ತಾನು ಕೂಡಾ ಉತ್ತಮವಾಗಿದೆ. ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಲೋಡ್ ಶೆಡ್ಡಿಂಗ್ ಆಗುವುದಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ ವಿದ್ಯುತ್ ಬೆಲೆಯನ್ನು ಪರಿಷ್ಕರಿಸಲಾಗುತ್ತಿದೆ. ಈಗ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆ ಮಾಡಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡುವ ಬದಲು ವರ್ಷಕ್ಕೊಮ್ಮೆ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಸ್ತಾವನೆ ಮುಂದಿಟ್ಟಿದ್ದೇನೆ. ಗ್ರಾಹಕರಿಗೆ ಹೊರೆಯಾಗುವುದರಿಂದ ವರ್ಷಕ್ಕೊಮ್ಮೆ ದರ ಹೆಚ್ಚಿಸುವುದು ಸೂಕ್ತ ಎಂದು ಹೇಳಲಾಗಿದೆ ಎಂದರು.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…