ಮಿಜೋರಾಂ ಪ್ರದೇಶದ ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ಸಮೀಪ ಅಥವಾ ರಾಜ್ಯದ ಹೊರಗೆ ಸಾಗಿಸಲು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಇದೀಗ ಅಡಿಕೆ ಬೆಳೆಗಾರರು ಹೋರಾಟಕ್ಕೆ ಮುಂದಾಗಿದ್ದಾರೆ. ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಗಡಿಯಲ್ಲಿರುವ ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಕೆ ಬೆಳೆಗಾರರು ಒಂದು ವಾರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರಂಭದ 4 ದಿನಗಳ ಕಾಲ ಕಚೇರಿಗಳಿಗೆ ಮುತ್ತಿಗೆ ಹಾಗೂ ಆ ಬಳಿಕ ಹೆದ್ದಾರಿ ತಡೆ ನಡೆಸಲು ನಿರ್ಧರಿಸಿದ್ದಾರೆ.
ಮಂಗಳವಾರದಿಂದ ಪ್ರಾರಂಭವಾದ ಮುಷ್ಕರ ವಾರಗಳ ಕಾಲ ನಡೆಯಲಿದೆ. ಮಿಜೋರಾಂನ ಹಚ್ಚೇಕ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 32 ಗ್ರಾಮಗಳ ಪೈಕಿ 30 ಗ್ರಾಮಗಳಲ್ಲಿ ಅಡಿಕೆ ತೋಟವಿದೆ. ಆದರೆ ಇಲ್ಲಿ ಬೆಳೆದ ಅಡಿಕೆಯ ಸಾಗಾಟಕ್ಕೆ ಕಷ್ಟವಾಗುತ್ತಿದೆ ಎಂಬುದು ಅಲ್ಲಿನ ಬೆಳೆಗಾರರ ಆರೋಪ. ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು ತಡೆಯುತ್ತಿದ್ದಾರೆ. ಅಸ್ಸಾಂ, ಮಿಜೋರಾಂ ಮೂಲಕ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಪೊಲೀಸರು ಅಡಿಕೆ ಸಾಗಾಟವನ್ನು ತಡೆಯುತ್ತಿದ್ದಾರೆ.
ಮಿಜೋರಾಂ ಅಡಿಕೆ ಬೆಳೆಗಾರರ ಸಂಘವು ಅಲ್ಲಿನ ಮುಖ್ಯಮಂತ್ರಿಗಳ ಜೊತೆ ಹಾಗೂ ಉನ್ನತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಬೆಳೆಗಾರರು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರವು ರೈತರಿಗೆ ಗುರುತಿನ ಚೀಟಿ ನೀಡುವುದಾಗಿ ಹೇಳಿತ್ತು. ಇದರಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ ಇರಲಿಲ್ಲ. ಹಾಗಿದ್ದರೂ ಇದೀಗ ಪ್ರತಿಭಟನೆ ಆರಂಭವಾಗಿದೆ. ನ.8 ಕ್ಕೂ ಮೊದಲು ಸಂಕಷ್ಟಗಳನ್ನು ಪರಿಹರಿಸಲು ಸೂಕ್ತ ಕ್ರಮಕೈಗೊಳ್ಳದೇ ಇದ್ದರೆ ನ.9 ರಿಂದ ಹಚೆಕ್ ಪ್ರದೇಶದಲ್ಲಿ ಅನಿರ್ದಿಷ್ಟಾವಧಿ ಸಂಪೂರ್ಣ ಬಂದ್ ಮಾಡುವುದಾಗಿ ಅಡಿಕೆ ಬೆಳೆಗಾರರು ಹೇಳಿದ್ದಾರೆ.
ಅಸ್ಸಾಂ ಸರ್ಕಾರವು ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಕಳ್ಳಸಾಗಣೆ ಮಾಡಲಾಗುತ್ತಿರುವ ಒಣ ಅಡಿಕೆಗಳ ಸಾಗಾಣಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮಿಜೋರಾಂ ಅಡಿಕೆ ಬೆಳೆಗಾರರ ಮೂಲಕ ಅಡಿಕೆ ಕಳ್ಳಸಾಗಾಣಿಕೆದಾರರು ಹೊಸದೊಂದು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಇಲಾಖೆಗಳ ಸಂದೇಹವಾಗಿದೆ. ಮಿಜೋರಾಂನಲ್ಲಿ ಹಸಿ ಅಡಿಕೆಯ ವ್ಯವಹಾರಗಳೇ ಹೆಚ್ಚಾಗಿ ನಡೆಯುತ್ತಿರುವಾಗ ಒಣ ಅಡಿಕೆ ಸಾಗಾಟ ನಿಷೇಧ ತೆರವು ಬಗ್ಗೆ ನಡೆಸುತ್ತಿರುವ ಹೋರಾಟವೂ ಇದೇ ಉದ್ದೇಶವಾಗಿದೆ ಎಂದು ಚರ್ಚೆಯಾಗುತ್ತಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…