ಮಾದಕ ವ್ಯಸನಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

December 14, 2023
9:54 PM

ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

Advertisement
Advertisement

ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147  ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ, 528 ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ 26 ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

Advertisement

ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.

ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror