ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147 ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ, 528 ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ 26 ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.
ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…