ಶಾಸಕ ಹರೀಶ್ ಪೂಂಜಾ ಅವರರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲವಾರು ತೋರಿಸಿ ಬೆದರಿಸಿದ ಪ್ರಕರಣದ ತನಿಖೆಯನ್ನು ಸಿಐಡಿ ಗೆ ಹಸ್ತಾಂತರಿಸಲಾಗಿದೆ. ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ಈ ಘಟನೆ ನಡೆದಿತ್ತು.
ಶಾಸಕರ ಕಾರನ್ನು ಹಿಂಬಾಲಿಸಿದ ದುಷ್ಕರ್ಮಿಯೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಲು ಯತ್ನಿಸಿದ್ದ ಎಂದು ಶಾಸಕರ ಕಾರು ಚಾಲಕ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ತನಿಖೆಯ ವೇಳೆ ಯಾವುದೇ ಆಯುಧ ಪತ್ತೆಯಾಗಿಲ್ಲ. ಅದಾದ ಬಳಿಕ ಆರೋಪಿಯ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು ಕಾರಿನ ಸ್ಪಾನರ್ ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣ ಹೊಸ ಆಯಾಮ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel