ಶಾಸಕ ಹರೀಶ್‌ ಪೂಂಜಾಗೆ ತಲವಾರು ತೋರಿಸಿ ಬೆದರಿಕೆ ಪ್ರಕರಣ | ಸಿಐಡಿಗೆ ಹಸ್ತಾಂತರ |

October 18, 2022
11:48 AM

ಶಾಸಕ ಹರೀಶ್ ಪೂಂಜಾ ಅವರರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲವಾರು ತೋರಿಸಿ ಬೆದರಿಸಿದ ಪ್ರಕರಣದ ತನಿಖೆಯನ್ನು ಸಿಐಡಿ ಗೆ ಹಸ್ತಾಂತರಿಸಲಾಗಿದೆ. ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ಈ ಘಟನೆ ನಡೆದಿತ್ತು.

ಶಾಸಕರ ಕಾರನ್ನು ಹಿಂಬಾಲಿಸಿದ ದುಷ್ಕರ್ಮಿಯೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಲು ಯತ್ನಿಸಿದ್ದ ಎಂದು ಶಾಸಕರ ಕಾರು ಚಾಲಕ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ತನಿಖೆಯ ವೇಳೆ ಯಾವುದೇ ಆಯುಧ ಪತ್ತೆಯಾಗಿಲ್ಲ. ಅದಾದ ಬಳಿಕ ಆರೋಪಿಯ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು ಕಾರಿನ ಸ್ಪಾನರ್‌ ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣ ಹೊಸ ಆಯಾಮ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror