ಪರಿಸರ ಬೆಳೆಸುವ ನಿಟ್ಟಿನಲ್ಲಿ ರಸ್ತೆ ಇಕ್ಕೆಲಗಳಲ್ಲಿ ಗಿಡ | ಮಲೆನಾಡು ಜನಹಿತರಕ್ಷಣಾ ವೇದಿಕೆ ನಿರ್ಧಾರ

September 23, 2020
3:26 PM
ರಿಸರ ಬೆಳೆಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಶಿಕ್ಷಣ ಸಂಸ್ಥೆ, ರಸ್ತೆ ಇಕ್ಕೆಲಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ತಾಲೂಕು ಸಂಚಾಲಕ ಭಾನುಪ್ರಕಾಶ್ ಪೆರುಮುಂಡ ತಿಳಿಸಿದ್ದಾರೆ.
ದ.ಕ.ಜಿಲ್ಲೆಯ 7 ಕಂದಾಯ ತಾಲೂಕುಗಳ ಪೈಕಿ ಸುಳ್ಯ ತಾಲೂಕನ್ನು ಪ್ರಸಕ್ತ ಸಾಲಿನ ರಾಜ್ಯ ಸರಕಾರ ಘೋಷಿಸಿದ ಅತಿವೃಷ್ಠಿ – ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಿಂದ ಕೈ ಬಿಟ್ಟಿರುವ ಕ್ರಮವನ್ನು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಖಂಡಿಸಿದೆ. ತಕ್ಷಣ ಅತಿವೃಷ್ಠಿ ಪೀಡಿತ ತಾಲೂಕಾಗಿ ಸೇರ್ಪಡೆಗೊಳಿಸುವಂತೆ ಸರಕಾರವನ್ನು ಆಗ್ರಹಿಸಿದೆ. ತಿಂಗಳೊಳಗಾಗಿ ಅತಿವೃಷ್ಠಿ ಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸರಕಾರವನ್ನು ಆಗ್ರಹಿಸಿದ್ದು ತಪ್ಪಿದಲ್ಲಿ ತಾಲುಕು ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.
ದ.ಕ.ಜಿಲ್ಲೆಯ ಇತರ ತಾಲೂಕಿನಂತೆ ಸುಳ್ಯ ತಾಲೂಕಿನಲ್ಲೂ ಅಧಿಕ ಮಳೆಯ ಪರಿಣಾಮವಾಗಿ ಸಾಕಷ್ಟು ಹಾನಿಯಾಗಿದೆ. ಈ ಬಾರಿಯೂ ಅಧಿಕ ಮಳೆಯ ಪರಿಣಾಮ ರಸ್ತೆಯಂತಹ ಮೂಲಭೂತ ಸೌಕರ್ಯಗಳಾದಿಯಾಗಿ ಮನೆ, ಜಾನುವಾರು, ಕೃಷಿ ಹಾನಿಗೊಳಗಾಗಿ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿಗೆ ಸಂಬಂಧಿಸಿ ಬೆಳೆವಿಮೆ, ಮಳೆಹಾನಿ ಕಾಮಗಾರಿಗಳಂತಹ ಪರಿಹಾರ ದೊರೆಯುವ ನಿಟ್ಟಿನಲ್ಲಾಗುವ ತೊಡಕುಗಳ ನಿವಾರಣೆಗೆ ಸರಕಾರ ತುರ್ತಾಗಿ ಗಮನಹರಿಸಿ ತಾಲೂಕನ್ನು ಅತಿವೃಷ್ಠಿ ಪ್ರದೇಶವನ್ನಾಗಿ ಘೋಷಿಸಬೇಕು.ತಾಲೂಕನ್ನು ನಿರ್ಲಕ್ಷ್ಯ ಮಾಡುವ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪರಿಸರ ಪ್ರಮುಖ್ ಅಭಿಷೆಕ್ ದುಗಲಡ್ಕ, ಮಡಿಕೇರಿ ತಾಲೂಕು ಸಂಚಾಲಕ ಬನ್ನೂರುಪಟ್ಟೆ ಪ್ರದೀಪ್ ಕರಿಕೆ, ಜಿಲ್ಲಾ ಸಮಿತಿ ಸದಸ್ಯ ಟಿ.ಎನ್.ಸತೀಶ್ ಕುಮಾರ್ ಕಲ್ಮಕಾರ್, ತಾಲೂಕು ಸಮಿತಿ ಸದಸ್ಯ ಭರತ್ ಕನ್ನಡ್ಕ ಉಪಸ್ಥಿತರಿದ್ದರು.
ಇದೇ ವೇಳೆ ಉಪತಹಶೀಲ್ದಾರ್ ಚಂದ್ರಕಾಂತ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |
January 26, 2025
7:35 AM
by: The Rural Mirror ಸುದ್ದಿಜಾಲ
ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ
January 26, 2025
7:14 AM
by: The Rural Mirror ಸುದ್ದಿಜಾಲ
ಭಾರತಕ್ಕೆ ಹುರಿದ ಅಡಿಕೆ ಆಮದು | ತಕ್ಷಣವೇ ಕ್ರಮ ಕೈಗೊಳ್ಳಲು ಕ್ಯಾಂಪ್ಕೊ ಒತ್ತಾಯ|
January 25, 2025
10:39 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ 4 ಮಂಗನ ಕಾಯಿಲೆ ಪ್ರಕರಣಗಳು ಪತ್ತೆ
January 25, 2025
7:08 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror