ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಂತೆ ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ್ ಬಾಬಳಗಿ ಮನವಿ ಮಾಡಿದ್ದಾರೆ.
ದಿನಕ್ಕೆ 370 ರೂಪಾಯಿ ಕೂಲಿ ದರ ಏರಿಕೆ ಮಾಡಲಾಗಿದ್ದು. ಗ್ರಾಮೀಣ ಪ್ರದೇಶದ ಅರ್ಹ ಕೂಲಿ ಕಾರ್ಮಿಕರು ನರೇಗಾ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಹಳ್ಳ, ಕೆರೆ, ನಾಲಾ, ಚೆಕ್ ಡ್ಯಾಮ್ ಹೂಳೆತ್ತುವುದು, ಕಂದಕ ಬದು ನಿರ್ಮಾಣ ಮಾಡುವ ಮೂಲಕ ನೈಸರ್ಗಿಕ ಜಲ ಸಂಪತ್ತು ರಕ್ಷಿಸಿ ಬಲಪಡಿಸಲು ಹಾಗೂ ಕಾರ್ಮಿಕರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಹೆಚ್ಚು ಕೂಲಿ ಕೆಲಸ ಆಧಾರಿತ ಕಾಮಗಾರಿ ಆಯ್ದುಕೊಳ್ಳಲಾಗಿದೆ ಎಂದು ಎಂದು ಸ್ಪಷ್ಟಪಡಿಸಿದ್ದಾರೆ. ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಅರ್ಹ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ನೂರು ದಿನಗಳ ಕೂಲಿ ಕೆಲಸದ ಖಾತ್ರಿ ನೀಡಿದೆ. ಒಂದು ಕುಟುಂಬ ನೂರು ದಿನ ಕೆಲಸ ಮಾಡಿದರೆ 37000 ರೂಪಾಯಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490