ನೆಟ್‍ವರ್ಕ್ ಸಮಸ್ಯೆಯಿಂದ ಜಿಲ್ಲೆಯಲ್ಲಿ ಹಲವು ಸಮಸ್ಯೆ | ಉತ್ತಮ ಸೇವೆ ಒದಗಿಸಲು ಸಂಸದ ನಳಿನ್‌ ಕುಮಾರ್‌ ಕಟೀಲು ಸೂಚನೆ |

June 1, 2021
10:18 PM

ದ ಕ ಜಿಲ್ಲೆಯಲ್ಲಿ ನೆಟ್‍ವರ್ಕ್ ಸಮಸ್ಯೆಯಿಂದಾಗಿ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ  ದೈನಂದಿನ ದೂರವಾಣಿಯಿಂದ ತೊಡಗಿ ಸರ್ಕಾರದ ಹಲವು ಸೌಲಭ್ಯವನ್ನು ಉಪಯೋಗಿಸಲು ತೊಂದರೆ ಉಂಟಾಗುತ್ತಿದೆ. ಹೀಗಾಗದಂತೆ ಎಲ್ಲಾ ಮೊಬೈಲ್ ನೆಟ್ವರ್ಕಿಂಗ್ ಕಂಪೆನಿಗಳು ಎಚ್ಚರ ವಹಿಸುವುದರೊಂದಿಗೆ ಉತ್ತಮ ಸೇವೆಯನ್ನು ಒದಗಿಸಲು ಮುಂದಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್  ಸೂಚನೆ ನೀಡಿದ್ದಾರೆ.

Advertisement

ಅವರು ಮಂಗಳವಾರ ಮಂಗಳೂರಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಕುರಿತ ಸಭೆಯಲ್ಲಿ  ಮಾತನಾಡಿದರು. ನೆಟ್‍ವರ್ಕ್ ಸಮಸ್ಯೆಯಿಂದಾಗಿ  ಕೋವಿಡ್ ಸೋಂಕಿತರಿಗೆ ಮೆಡಿಕಲ್ ಟ್ರೀಟ್‍ಮೆಂಟ್ ಕೊಡಲು ಪಡಿತರ ವಿತರಣೆ, ಜಿ.ಪಿ.ಎಸ್ ಆಧಾರದ ಮೇಲೆ ಗೃಹ ನಿರ್ಮಾಣದ ಅನುದಾನ ನೀಡಲು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಕಳೆದ ವರ್ಷ ಕೊರೋನಾದಿಂದ ಶಾಲಾ –ಕಾಲೇಜುಗಳು ಪ್ರಾರಂಭವಾಗದಿದ್ದರೂ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಇದರಿಂದ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ವರ್ಕ್‍ಫ್ರಮ್ ಹೋಮ್‍ನಡಿ ಕಾರ್ಯನಿರ್ವಹಿಸುತ್ತಿರುವವರಿಗೆ ನೆಟ್‍ವರ್ಕ್ ಸಮಸ್ಯೆ ಉಂಟಾಗಿ ಎತ್ತರ ಪ್ರದೇಶಗಳನ್ನು ಹುಡುಕಿಕೊಂಡು ಹೋಗುವಂತ ಪರಿಸ್ಥಿತಿ ಉಂಟಾಗಿದೆ ಎಂದರು.

ಸರ್ಕಾರ ಸ್ವಾಮ್ಯದ ಬಿ.ಎಸ್.ಎನ್.ಎಲ್ ಮುಂಚೂಣಿ ಕಂಪೆನಿಯಾಗಿದ್ದರೂ ಸಹ ಜಿಲ್ಲೆಯಲ್ಲಿನ ಗ್ರಾಹಕರುಗಳಿಗೆ ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಲು ಯೋಜನೆಯನ್ನು ರೂಪಿಸುವುದರೊಂದಿಗೆ ಉತ್ತಮ ನೆಟ್‍ವರ್ಕ್ ಸೌಲಭ್ಯವನ್ನು ಒದಗಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನರಿಗೆ ತೊಂದರೆಯಾಗದಂತೆ ಉತ್ತಮ ಮೊಬೈಲ್ ನೆಟ್‍ವರ್ಕಿಂಗ್ ಸೇವೆಯನ್ನು ಒದಗಿಸಲು, ಅಗತ್ಯವಿರುವ ಮೊಬೈಲ್ ಗೋಪುರಗಳ ನಿರ್ಮಾಣಕ್ಕೆ ಸರ್ಕಾರದ ಜಾಗವನ್ನು ಅಥವಾ ಕಟ್ಟಡಗಳ ಮೇಲೆ ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.

Advertisement

ಮೀನುಗಾರಿಕಾ ಹಾಗೂ ಬಂದರು ಸಚಿವರಾದ ಎಸ್. ಅಂಗಾರ ಮಾತನಾಡಿ, ಎಲ್ಲಾ ಮೊಬೈಲ್ ನೆಟ್‍ವರ್ಕ್ ಸಂಸ್ಥೆಗಳು ಜನರಿಗೆ ಉತ್ತಮ ಸೇವೆ ಒದಗಿಸಲು ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ಸ್ಥಳೀಯ ಶಾಸಕರುಗಳನ್ನು ಸಂಪರ್ಕಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಂಡು ಉತ್ತಮ ಮೊಬೈಲ್ ನೆಟ್‍ವರ್ಕ್ ಸೇವೆಯನ್ನು ಒದಗಿಸಬೇಕು ಎಂದರು.

Advertisement

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ  ನೆಟ್‍ವರ್ಕಿಂಗ್ ಸೌಲಭ್ಯವನ್ನು ಒದಗಿಸುವ ಸಂಬಂಧ ಈಗಾಗಲೇ ಸಭೆಯನ್ನು ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸಲು ಮುಂದಾಗಲಾಗಿದೆ ಎಂದ ಅವರು ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ  ನಮ್ಮ ಗಮನಕ್ಕೆ ತರಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಜಿಲ್ಲೆಯ 223 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 676 ಮೊಬೈಲ್ ಟವರ್‌ ಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಹೊಸದಾಗಿ ನಿರ್ಮಾಣ ಮಾಡಲು 26 ಅರ್ಜಿಗಳು ಬಾಕಿ ಇವೆ. ಬಂಟ್ವಾಳ ತಾಲೂಕಿನಲ್ಲಿ 5, ಬೆಳ್ತಂಗಡಿ ತಾಲೂಕಿನಲ್ಲಿ 1, ಕಡಬ ತಾಲೂಕಿನಲ್ಲಿ 2, ಮಂಗಳೂರು ತಾಲೂಕಿನಲ್ಲಿ 5, ಪುತ್ತೂರು ತಾಲೂಕಿನಲ್ಲಿ 5 ಹಾಗೂ ಸುಳ್ಯ ತಾಲೂಕಿನಲ್ಲಿ 7, ಮೂಡಬಿದ್ರೆ ತಾಲೂಕಿನಲ್ಲಿ 1  ಬಾಕಿ ಇವೆ. ಕೆಲವು ಜನರಿಂದ ಮೊಬೈಲ್ ಟವರ್ ನಿರ್ಮಾಣಕ್ಕೆ ಆಕ್ಷೇಪಣೆಗಳು ಬಂದರೆ ಕೆಲವೊಂದು ಕಂಪೆನಿಗಳು ತಮ್ಮ ವಾರ್ಷಿಕ ಶುಲ್ಕವನ್ನು ಪಾವತಿ ಮಾಡದೇ ಇರುವುದು ಕಾರಣವಾಗಿದೆ ಎಂದರು. ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿರುವ  ಪ್ರತಿಯೊಂದು ಟವರ್‍ಗಳಿಗೆ ಸರ್ಕಾರ ವಿಧಿಸಿರುವ ವಾರ್ಷಿಕ 12,000 ಶುಲ್ಕವನ್ನು ಪಾವತಿ ಮಾಡಬೇಕು. ಆದರೆ, ಈವರೆಗೆ ವಿವಿಧ ಕಂಪೆನಿಗಳ ಪಾವತಿ ಬಾಕಿಯು 83 ಲಕ್ಷ ಗಳಷ್ಟಿವೆ. ಬಂಟ್ವಾಳ ತಾಲೂಕಿನಲ್ಲಿ 47 ಲಕ್ಷ, ಬೆಳ್ತಂಗಡಿ ತಾಲೂಕಿನಲ್ಲಿ 9 ಲಕ್ಷ, ಕಡಬ ತಾಲೂಕಿನಲ್ಲಿ 2 ಲಕ್ಷ, ಮಂಗಳೂರು ತಾಲೂಕಿನಲ್ಲಿ 1.80 ಲಕ್ಷ , ಪುತ್ತೂರು ತಾಲೂಕಿನಲ್ಲಿ 17 ಲಕ್ಷ. ಮೂಡಬಿದ್ರೆ ತಾಲೂಕಿನಲ್ಲಿ 1.20 ಲಕ್ಷ ಹಾಗೂ ಸುಳ್ಯ ತಾಲೂಕಿನಲ್ಲಿ 4 ಲಕ್ಷ ಬಾಕಿ ಇರುತ್ತದೆ ಎಂದರು.

ಸಭೆಯಲ್ಲಿ ಕಾರ್ಯ  ಅಪರ ಜಿಲ್ಲಾಧಿಕಾರಿ ಪ್ರಜ್ಞಾ, ಶಾಸಕರಾದ ಉಮಾನಾಥ್ ಕೋಟ್ಯಾನ್, ಭರತ್ ವೈ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯಕ್, ಸಂಜೀವ ಮಠಂದೂರ್ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್  ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group