06.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಕ್ಟೊಬರ್ 6ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಅಕ್ಟೊಬರ್ 11ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಹಾಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 6ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ವಾಯುಭಾರ ಕುಸಿತ : ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…
ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…