ಸಂಚಾರ ವಲಯದಲ್ಲಿ ಮೂಲಸೌಕರ್ಯ ತಂತ್ರಜ್ಞಾನ ಕುರಿತ ಟ್ರಾಫಿಕ್ ಇನ್ಫ್ರಾ ಟೆಕ್ ಪ್ರದರ್ಶನವನ್ನು ದೆಹಲಿಯಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಸ್ತೆ ಸುರಕ್ಷತೆ , ಪರಿಸರ ಸ್ನೇಹಿ ವ್ಯವಸ್ಥೆ ಸುಧಾರಣೆಗೆ ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ರಸ್ತೆಗಳ ನಿರ್ಮಾಣದಲ್ಲೂ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ರಸ್ತೆಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಪ್ರತಿಭಾನ್ವಿತ ಇಂಜಿನಿಯರ್ ಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು. ಅಪಘಾತಗಳ ಸಂಖ್ಯೆ ತಗ್ಗಿಸಲು ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಸಂಖ್ಯಾತ ಎಕ್ಸ್ ಪ್ರೆಸ್ ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದೆ. ರಸ್ತೆ ಸುರಕ್ಷತೆಗಾಗಿ ಖಾಸಗಿ ವಲಯದಲ್ಲಿನ ತಂತ್ರಜ್ಞರನ್ನು ಸಚಿವಾಲಯ ನೇಮಕ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…