ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

May 8, 2023
9:50 AM

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ  ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.

ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.

ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror