ಮೋದಿ ಅವರೇ ಮುಂದಿನ ಪ್ರಧಾನಿ | ಎನ್‌ಡಿಎ ಸಭೆಯಲ್ಲಿ ‘ನಮೋ’ ನಾಯಕತ್ವಕ್ಕೆ ಹಸಿರು ನಿಶಾನೆ | ಸರ್ಕಾರ ರಚನೆಗೆ ರಾಷ್ಟ್ರಪತಿ ಬಳಿ ಇಂದು ಸಂಜೆ ಹಕ್ಕು ಮಂಡಿಸುವ ಸಾಧ್ಯತೆ

June 6, 2024
12:06 PM

ಚುನಾವಣಾ ಸಮಿಕ್ಷೆ(Exit poll) ಮಾಡಿದ ಅನೇಕ ಸಂಸ್ಥೆಗಳ ಪ್ರಕಾರ ಬಿಜೆಪಿ(BJP) ಬಹುಮತದೊಂದಿಗೆ(majority) ಮೂರನೇ ಭಾರಿ ಅಧಿಕಾರಕ್ಕೆ ಏರಲಿದ್ದಾರೆ ಎಂದು ಭವಿಷ್ಯ ನುಡಿದಿತ್ತು. ಆದರೆ ಲೋಕಸಭೆ ಚುನಾವಣಾ ಫಲಿತಾಂಶ(Result) ತಲೆ ಕೆಳಗಾಗಿಸಿತು.  ಆದರೆ ಮೋದಿ ಮೂರನೇ ಭಾರಿ ಪ್ರಧಾನಿ ಹುದ್ದಗೇರುವುದು(PM Post) ಮಾತ್ರ ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.

ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್‌ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್‌ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದಿದ್ದಾರೆ. ‘ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್‌ ಸಲಹೆ ನೀಡಿದ್ದಾರೆ.

ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರ ರಚನೆಗೆ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ.  ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror