ಚುನಾವಣಾ ಸಮಿಕ್ಷೆ(Exit poll) ಮಾಡಿದ ಅನೇಕ ಸಂಸ್ಥೆಗಳ ಪ್ರಕಾರ ಬಿಜೆಪಿ(BJP) ಬಹುಮತದೊಂದಿಗೆ(majority) ಮೂರನೇ ಭಾರಿ ಅಧಿಕಾರಕ್ಕೆ ಏರಲಿದ್ದಾರೆ ಎಂದು ಭವಿಷ್ಯ ನುಡಿದಿತ್ತು. ಆದರೆ ಲೋಕಸಭೆ ಚುನಾವಣಾ ಫಲಿತಾಂಶ(Result) ತಲೆ ಕೆಳಗಾಗಿಸಿತು. ಆದರೆ ಮೋದಿ ಮೂರನೇ ಭಾರಿ ಪ್ರಧಾನಿ ಹುದ್ದಗೇರುವುದು(PM Post) ಮಾತ್ರ ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಎನ್‌ಡಿಎ ನಾಯಕರ ಸಭೆ ಕರೆಯಲಾಗಿತ್ತು. ನರೇಂದ್ರ ಮೋದಿ ಅವರ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್‌ಡಿಎ ನಾಯಕರು ಸಭೆಯಲ್ಲಿ ಹಾಜರಿದ್ದರು. ಸಭೆಯಲ್ಲಿ ಎಲ್ಲಾ ನಾಯಕರು ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದಿದ್ದಾರೆ. ‘ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.
ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರ ರಚನೆಗೆ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
– ಅಂತರ್ಜಾಲ ಮಾಹಿತಿ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…