Advertisement
ಸುದ್ದಿಗಳು

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

Share

ರಾಸಾಯನಿಕ ಮುಕ್ತ ಕೃಷಿಗೆ ದೇಶದ ರೈತರು ಹೆಚ್ಚಿನ ಆಸಕ್ತಿ ವಹಿಸಬೇಕು. ಇದು ವಿಕಸಿತ ಭಾರತ ಮತ್ತು ವಿಕಸಿತ ಕರ್ನಾಟಕ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಸುಮಾರು ₹80 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ದ್ರಾವಿಡ ಶೈಲಿಯ ನೂತನ ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸಲು ಜನತೆ 9 ಪ್ರಮುಖ ಅಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರಧಾನಿ ನೀಡಿದ ಪ್ರಮುಖ ಕರೆಗಳು,

  • ಜಲ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆ
  • ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಮರ ನೆಡುವುದು
  • ಗ್ರಾಮ, ನಗರ ಹಾಗೂ ಧಾರ್ಮಿಕ ಸ್ಥಳಗಳ ಸ್ವಚ್ಛತೆ
  • ರಾಸಾಯನಿಕ ಮುಕ್ತ, ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಆದ್ಯತೆ
  • ಯೋಗ, ಕ್ರೀಡೆ ಮತ್ತು ಫಿಟ್ನೆಸ್ ಜೀವನದ ಭಾಗವಾಗಬೇಕು
  • ಆರೋಗ್ಯಕರ ಆಹಾರ ಪದ್ಧತಿ – ರಾಗಿ ಬಳಕೆ, ಕಡಿಮೆ ಎಣ್ಣೆ
  • ಬಡವರು ಮತ್ತು ಹಿಂದುಳಿದವರ ಸೇವೆ
  • ದೇಶೀಯ ಪ್ರವಾಸೋದ್ಯಮಕ್ಕೆ ಉತ್ತೇಜನ

ಈ ಒಂಬತ್ತು ಧ್ಯೇಯಗಳನ್ನು ಅನುಸರಿಸಿದರೆ ಭಾರತ ಶೀಘ್ರದಲ್ಲೇ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಿ ಮೋದಿ ಅವರು ಮಠದ ಗೋರಕ್ಷಕನಾಥರು ತಪಸ್ಸು ಮಾಡಿದ ಜ್ವಾಲಾಪೀಠಕ್ಕೆ ಭೇಟಿ ನೀಡಿ, ಬಳಿಕ ಕಾಲಭೈರವೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಸೌಂದರ್ಯ ಲಹರಿ ಮತ್ತು ಶಿವಸ್ತೋತ್ರ ಗ್ರಂಥಗಳನ್ನು ಬಿಡುಗಡೆ ಮಾಡಿದರು.

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಆದಿಚುಂಚನಗಿರಿ ಮಠವು ಶಿಕ್ಷಣ, ಆರೋಗ್ಯ ಹಾಗೂ ಸಮಾಜ ಸೇವೆಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು.

ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರು ಲಕ್ಷಾಂತರ ಬಡಮಕ್ಕಳ ಬದುಕಿನಲ್ಲಿ ಬೆಳಕು ತುಂಬಿದವರು ಎಂದು ಹೇಳಿದರು. ಜೊತೆಗೆ ಸುಮಾರು 5 ಕೋಟಿ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Prime Minister Narendra Modi inaugurated the newly built Bhairavaikya Mandir at Adichunchanagiri in Mandya district and urged farmers to adopt chemical-free organic farming. He highlighted nine key areas for building a developed India.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

6 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

7 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

7 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

17 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

18 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

22 hours ago