ಈ ದಶಕದ ಅಂತ್ಯದ ವೇಳೆಗೆ ಭಾರತವು 6G ಸೇವೆಗಳನ್ನು ಪ್ರಾರಂಭಿಸಲು ಯೋಜಿಸುತ್ತಿದೆ ಮತ್ತು ಆ ನಿಟ್ಟಿನಲ್ಲಿ ಕಾರ್ಯಪಡೆಯು ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.
ಅವರು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ರಜತ ಮಹೋತ್ಸವ ಆಚರಣೆಯಲ್ಲಿ ಸ್ವಯಂ ನಿರ್ಮಿತ 5G ಟೆಸ್ಟ್ ಬೆಡ್ ಅನ್ನು ಉದ್ಘಾಟಿಸಿದ ಬಳಿಕ ಮಾತನಾಡಿ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ವೇಗವಾದ ಮತ್ತು ಸಮರ್ಥ ತಂತ್ರಜ್ಞಾನದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಈ ದೇಶದ ಸಂಪರ್ಕ ವ್ಯವಸ್ಥೆಯು 21 ನೇ ಶತಮಾನದ ಭಾರತದಲ್ಲಿ ಪ್ರಗತಿಯ ವೇಗವನ್ನು ನಿರ್ಧರಿಸುತ್ತದೆ. ಆದ್ದರಿಂದ, ಸಂಪರ್ಕವನ್ನು ಪ್ರತಿ ಹಂತದಲ್ಲೂ ಆಧುನೀಕರಿಸಬೇಕಾಗಿದೆ ಎಂದರು.
5ಜಿ ತಂತ್ರಜ್ಞಾನವು ದೇಶದ ಆಡಳಿತದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಮೋದಿ ಹೇಳಿದರು. “ಇದು ಕೃಷಿ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್‌ನಂತಹ ಪ್ರತಿಯೊಂದು ವಲಯದಲ್ಲಿ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಇದು ಅನುಕೂಲವನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ” ಎಂದು ಮೋದಿ ಹೇಳಿದರು.
2G ಯುಗದ ಹತಾಶೆಗಳಿಂದ ಹೊರಬಂದು, ದೇಶವು 3G ಯಿಂದ 4G ಮತ್ತು ಈಗ 5G ಮತ್ತು 6G ಗೆ ವೇಗವಾಗಿ ಸಾಗಿದೆ ಎಂದು ಅವರು ಹೇಳಿದರು.ದೇಶದಲ್ಲಿಯೇ ಮೊಬೈಲ್ ಫೋನ್‌ಗಳ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು. ಇದು ಮೊಬೈಲ್ ಉತ್ಪಾದನಾ ಘಟಕಗಳನ್ನು ಎರಡರಿಂದ 200 ಕ್ಕೂ ಹೆಚ್ಚು ಹೆಚ್ಚಿಸಲು ಕಾರಣವಾಗಿದೆ ಎಂದು ಮೋದಿ ಹೇಳಿದರು.
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…