ಕಳೆದ ಕರ್ನಾಟಕ(Karnataka) ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಉಚಿತ ಭರವಸೆಗಳನ್ನು(Free Guarantee) ನೀಡಿ ಅಧಿಕಾರಕ್ಕೆ ಬಂತು. ಮೊದಲು ಒಪ್ಪಿ ಅಪ್ಪಿಕೊಂಡ ಜನರೇ ಈಗ ಈ ಉಚಿತ ಯೋಜನೆಗಳ(Free Scheme) ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.ಉಚಿತಗಳು ದೇಶದ ಅರ್ಥಿಕತೆಗೆ ಹೊಡೆತವೂ ಹೌದು. ಹಾಗೆ ಈ ಉಚಿತ ಭರವಸೆಗಳನ್ನು ಉಳಿಸಕೊಂಡು ಹೋಗುವುದು ಬಹಳ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿಯೇ ಪ್ರಧಾನಿ ಮೋದಿ ಅವರು ಉಚಿತ ಯೋಜನೆಗಳಿಗೆ ಆದ್ಯತೆ ನೀಡಲಿಲ್ಲ.
ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.
ಬಜೆಟ್ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು.
ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ. ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್ ಸಿದ್ಧಪಡಿಸಿ ಎಂದು ಹೇಳಿದ್ದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ ಬಜೆಟ್ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
– ಅಂತರ್ಜಾಲ ಮಾಹಿತಿ
It is common for governments in power to make heavy promises and free announcements during Lok Sabha Elections. But in the Interim Budget presented this time, the central government has taken a bold decision to break the tradition of giving free promises.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…