Advertisement
MIRROR FOCUS

ಬಜೆಟ್‌ನಲ್ಲಿ ಉಚಿತ ಭರವಸೆಗಳನ್ನು ಘೋಷಿಸದಂತೆ ಅಧಿಕಾರಿಗಳಿಗೆ PM ಮೋದಿ ಖಡಕ್‌ ಸೂಚನೆ

Share

ಕಳೆದ ಕರ್ನಾಟಕ(Karnataka) ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಉಚಿತ ಭರವಸೆಗಳನ್ನು(Free Guarantee) ನೀಡಿ ಅಧಿಕಾರಕ್ಕೆ ಬಂತು. ಮೊದಲು ಒಪ್ಪಿ ಅಪ್ಪಿಕೊಂಡ ಜನರೇ ಈಗ ಈ ಉಚಿತ ಯೋಜನೆಗಳ(Free Scheme) ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.ಉಚಿತಗಳು ದೇಶದ ಅರ್ಥಿಕತೆಗೆ ಹೊಡೆತವೂ ಹೌದು. ಹಾಗೆ ಈ ಉಚಿತ ಭರವಸೆಗಳನ್ನು ಉಳಿಸಕೊಂಡು ಹೋಗುವುದು ಬಹಳ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿಯೇ ಪ್ರಧಾನಿ ಮೋದಿ ಅವರು ಉಚಿತ ಯೋಜನೆಗಳಿಗೆ ಆದ್ಯತೆ ನೀಡಲಿಲ್ಲ. 

ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್‌ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.

ಬಜೆಟ್‌ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು.

ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ.  ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್‌ ಸಿದ್ಧಪಡಿಸಿ ಎಂದು ಹೇಳಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

– ಅಂತರ್ಜಾಲ ಮಾಹಿತಿ

It is common for governments in power to make heavy promises and free announcements during Lok Sabha Elections. But in the Interim Budget presented this time, the central government has taken a bold decision to break the tradition of giving free promises.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 hour ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

2 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

10 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

12 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

17 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

18 hours ago