ಮೊಗ್ರ ಸೇತುವೆ | ದಶಕಗಳ ಬೇಡಿಕೆ ಈಡೇರಿಕೆಯ ನಿರೀಕ್ಷೆ | ಸಚಿವ ಅಂಗಾರ ಅವರಿಂದ ಗುದ್ದಲಿ ಪೂಜೆ | ಗುತ್ತಿಗಾರು ಗ್ರಾಪಂ ವ್ಯಾಪ್ತಿಯಲ್ಲಿ 4.36 ಕೋಟಿ ಅನುದಾನ ಬಳಕೆ |

January 11, 2023
10:17 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಳೆದ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಮೊಗ್ರ ಸೇತುವೆ ಈಡೇರಿಕೆಯ ಭರವಸೆ ದೊರೆತಿದೆ. ಬುಧವಾರ ಸಚಿವ ಎಸ್‌ ಅಂಗಾರ ಅವರು ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಸುಮಾರು 1.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆಯು ಅತಿ ಶೀಘ್ರವೇ ಮುಗಿಯಲಿದೆ ಎಂದು ಸಚಿವರು ಭರವಸೆ ನೀಡಿದರು. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಲಿದೆ, ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದರು. ಗುತ್ತಿಗಾರು ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 4.36 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ಇದೇ ವೇಳೆ ನಡೆಯಿತು.

ಈ ಸಂದರ್ಭ ಜಿಲ್ಲಾ ಬಿಜೆಪಿ ಬಿ. ಜೆ. ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ, ಕೇಂದ್ರ ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ರೇವತಿ ಆಚಳ್ಳಿ, ಮೊಗ್ರ ವಾರ್ಡ್ ಸದಸ್ಯರುಗಳಾದ ಶಾರದಾ ಮುತ್ಲಾಜೆ., ಲತಾ ಕಮಿಲ, ವಸಂತ ಮೊಗ್ರ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಬಾಲಕೃಷ್ಣ ಚಿಕ್ಮುಳಿ, ಪ್ರೇಮಲತಾ ಚಿಕ್ಮುಳಿ, ರಾಕೇಶ್ ಮೆಟ್ಟಿನಡ್ಕ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೆಸರಾದ ದೊಡ್ಡಣ್ಣ ಗೌಡ ಚಿಕ್ಮುಳಿ, ಉಮೇಶ್ ಮಕ್ಕಿ, ಗ್ರಾಮಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಸಂಚಾಲಕ ಸುಧಾಕರ ಮಲ್ಕಜೆ ಮೊದಲಾದವರು ಇದ್ದರು.

ಗ್ರಾ.ಪಂ. ಮಾಜಿ ಸದಸ್ಯ ಜಯಪ್ರಕಾಶ್ ಮೊಗ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror