ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಳೆದ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಮೊಗ್ರ ಸೇತುವೆ ಈಡೇರಿಕೆಯ ಭರವಸೆ ದೊರೆತಿದೆ. ಬುಧವಾರ ಸಚಿವ ಎಸ್ ಅಂಗಾರ ಅವರು ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಸುಮಾರು 1.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆಯು ಅತಿ ಶೀಘ್ರವೇ ಮುಗಿಯಲಿದೆ ಎಂದು ಸಚಿವರು ಭರವಸೆ ನೀಡಿದರು. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಲಿದೆ, ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ ಎಂದರು. ಗುತ್ತಿಗಾರು ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 4.36 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ಇದೇ ವೇಳೆ ನಡೆಯಿತು.
ಈ ಸಂದರ್ಭ ಜಿಲ್ಲಾ ಬಿಜೆಪಿ ಬಿ. ಜೆ. ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ, ಕೇಂದ್ರ ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ರೇವತಿ ಆಚಳ್ಳಿ, ಮೊಗ್ರ ವಾರ್ಡ್ ಸದಸ್ಯರುಗಳಾದ ಶಾರದಾ ಮುತ್ಲಾಜೆ., ಲತಾ ಕಮಿಲ, ವಸಂತ ಮೊಗ್ರ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಬಾಲಕೃಷ್ಣ ಚಿಕ್ಮುಳಿ, ಪ್ರೇಮಲತಾ ಚಿಕ್ಮುಳಿ, ರಾಕೇಶ್ ಮೆಟ್ಟಿನಡ್ಕ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೆಸರಾದ ದೊಡ್ಡಣ್ಣ ಗೌಡ ಚಿಕ್ಮುಳಿ, ಉಮೇಶ್ ಮಕ್ಕಿ, ಗ್ರಾಮಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ, ಸಂಚಾಲಕ ಸುಧಾಕರ ಮಲ್ಕಜೆ ಮೊದಲಾದವರು ಇದ್ದರು.
ಗ್ರಾ.ಪಂ. ಮಾಜಿ ಸದಸ್ಯ ಜಯಪ್ರಕಾಶ್ ಮೊಗ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…