Advertisement
ಧಾರ್ಮಿಕ

ಮೊಗ್ರ ದೇವಸ್ಥಾನ | 48 ದಿನಗಳ ಕಾಲ ನಿರಂತರ ಗಣಪತಿ ಹವನ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48  ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.

ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು ನಿರ್ವಿಘ್ನವಾಗಿ ನಡೆಯಲು ಹಾಗೂ ಊರಿನ ಸಮಸ್ತ ಭಕ್ತರ ಹಿತಕ್ಕಾಗಿ 48  ದಿನಗಳ ಕಾಲ ನಿರಂತರವಾಗಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ  ನಡೆಯಲಿದೆ. 14  ಬೈಲುಗಳ ಮೂಲಕ ನಿರಂತರವಾಗಿ ಈ ಕಾರ್ಯ ನಡೆಯಲಿದೆ.

ಬುಧವಾರದಂದು ವೇ.ಮೂ.ಕೃಷ್ಣ ಭಟ್‌ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ  ವೆಂಕಟ್ರಮಣ ಎಂ ಎನ್‌, ದೊಡ್ಡಣ್ಣ ಗೌಡ ಚಿಕ್ಮುಳಿ,  ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್‌ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

9 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago