ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು ಜನವರಿಯಿಂದ ಇಲ್ಲಿವರೆಗೆ ಒಟ್ಟು 18 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ 14 ಜನರಿಗೆ ಕೆ.ಎಫ್.ಡಿ ಪತ್ತೆಯಾಗಿದ್ದು ಎರಡು ದಿನಗಳ ಹಿಂದೆ ಕೊಪ್ಪ ಹಾಗು ಎನ್.ಆರ್ ಪುರ ತಾಲೂಕಿನ ನಾಲ್ವರಲ್ಲಿ ಮತ್ತೆ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಶ್ವಥ್ ಬಾಬು 18 ಸೋಂಕಿತರಲ್ಲಿ 11 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. 7 ಜನರಿಗೆ ಚಿಕಿತ್ಸೆ ಮುಂದುವೆರೆದಿದೆ. ಜಿಲ್ಲೆಯ ಕೊಪ್ಪ, ಎನ್.ಆರ್ ಪುರ ತಾಲೂಕು ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕೊಪ್ಪ. ಎನ್.ಆರ್.ಪುರ. ಶೃಂಗೇರಿ ತಾಲೂಕಿನ ಅರಣ್ಯದಂಚಿನ ಗ್ರಾಮಗಳ ಮನೆಗಳಿಗೆ ತೆರಳಿ ಕಾಯಿಲೆ ಹರಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement