Advertisement
ಸುದ್ದಿಗಳು

#WeatherReport | ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

Share

ದೇಶದ ಕೆಲ ರಾಜ್ಯಗಳಲ್ಲಿ ಮುಂಗಾರು #Monsoon ಆರಂಭವಾದರೆ ಇನ್ನೂ ಕೆಲವು ರಾಜ್ಯಗಳಲ್ಲಿ ಉಷ್ಣಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ #Rain ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜೂನ್ 29ರವರೆಗೂ ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್,ರಾಜಸ್ಥಾನ, ಛತ್ತೀಸ್​ಗಢ, ಒಡಿಶಾ, ಕೇರಳ, ಮೇಘಾಲಯ, ಪಶ್ಚಿಮ ಬಂಗಾಳ, ಜಾರ್ಖಂಡ್, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡ, ಹರ್ಯಾಣ, ಉತ್ತರ ಪ್ರದೇಶ, ದೆಹಲಿ,ಅರುಣಾಚಲಪ್ರದೇಶ, ಕರ್ನಾಟಕ, ಅಸ್ಸಾಂನಲ್ಲಿ ಭಾರಿ ಮಳೆಯಾಗಲಿದೆ.  ಮಧ್ಯಪ್ರದೇಶದ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದ್ದು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಮೇಘಾಲಯ, ಒಡಿಶಾ, ಛತ್ತೀಸ್‌ಗಢ ಮತ್ತು ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ‘ಹಳದಿ’ ಮತ್ತು ‘ಆರೆಂಜ್’ ಅಲರ್ಟ್‌ಗಳನ್ನು ನೀಡಲಾಗಿದೆ.

ವಾಯುವ್ಯ ಭಾರತ ಜೂನ್ 28 ರಂದು ಪೂರ್ವ ರಾಜಸ್ಥಾನದ ಮೇಲೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಜೂನ್ 26 ರಂದು ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಬೀಳಲಿದೆ.

ಮಧ್ಯ ಭಾರತ ಮುಂದಿನ 5 ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ.

ದಕ್ಷಿಣ ಭಾರತ ಮುಂದಿನ 5 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಮತ್ತು ಮುಂದಿನ 2 ದಿನಗಳಲ್ಲಿ ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಜೂನ್ 27 ರಂದು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ. ಜೂನ್ 29 ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಪಶ್ಚಿಮ ಭಾರತ ಜೂನ್ 26 ರಂದು ಮಹಾರಾಷ್ಟ್ರ ಮತ್ತು ಗೋವಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಸೌರಾಷ್ಟ್ರ ಮತ್ತು ಕಚ್ ಸೇರಿದಂತೆ ಗುಜರಾತ್‌ನ ಕೆಲವು ಭಾಗಗಳಲ್ಲಿ ಜೂನ್ 29 ರವರೆಗೆ ಲಘು ಅಥವಾ ಸಾಧಾರಣ ಮಳೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

15 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago