ಕೇರಳಕ್ಕೆ ಮುಂಗಾರು ಪ್ರವೇಶ | ಎರಡು ದಿನದಲ್ಲಿ ದುರ್ಬಲ ಮುಂಗಾರು ರಾಜ್ಯಕ್ಕೆ ಪ್ರವೇಶ |

June 9, 2023
10:43 AM

ಬಹು ದಿನಗಳಿಂದ ಮುಂಗಾರು ಮಾರುತಕ್ಕಾಗಿ ಕಾದು ಕುಳಿತಿದ್ದ ಜನತೆಗೆ ನಿನ್ನೆ ಕೇರಳಕ್ಕೆ ಮುಂಗಾರು ಪ್ರವೇಶದ ಸುದ್ದಿ ಸಿಕ್ಕಿದೆ. ಮುಂದಿನ ಎರಡು ದಿನಗಳಲ್ಲಿ  ದುರ್ಬಲ ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ. ಈ ನಡುವೆ ಮುಂದಿನ ಐದು ದಿನಗಳ ಕಾಲ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರ ತಡವಾಗಿ ಮುಂಗಾರು ಮಾರುತಗಳು ಕೇರಳಕ್ಕೆ ಪ್ರವೇಶ ಪಡೆದುಕೊಂಡಿದೆ. ಗುರುವಾರ ರಾಜ್ಯದ ಶೇ.95ರಷ್ಟು  ಪ್ರದೇಶಗಳಲ್ಲಿ ಮಳೆಯಾಗಿದೆ. 48 ತಾಸುಗಳಲ್ಲಿ ರಾಜ್ಯಕ್ಕೆ ಮಾನ್ಸೂನ್ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪರ್ ಜಾಯ್ ಚಂಡಮಾರುತದ ಹೊಡೆತದಿಂದ ಕರ್ನಾಟಕದ ಕರಾವಳಿ ಭಾಗ ಪಾರಾಗಿದೆ. ಬಿಪರ್ ಜಾಯ್ ಸೈಕ್ಲೋನ್ ಕರಾವಳಿಯ ನೈರುತ್ಯ ಭಾಗದಿಂದ 900 ಕಿಮೀ ದೂರದಲ್ಲಿದ್ದು, ರಾಜ್ಯದ ಕರಾವಳಿ ಸಮೀಪಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ಗಂಟೆಗೆ 35-45 ಕಿಲೋ ಮೀಟರ್​ನಿಂದ  55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಅಂದಾಜಿದೆ.
ಹವಾಮಾನ ತಜ್ಞರು ಮತ್ತು ಹವಾಮಾನಶಾಸ್ತ್ರಜ್ಞರು ಈ ಹಿಂದೆ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಬೀಪರ್‌ಜಾಯ್‌ ಚಂಡಮಾರುತದ ರಚನೆಯನ್ನು ತಿಳಿಸಿದ್ದರು ಮತ್ತು ಅದು ಎಲ್ಲಾ ಸಂವಹನವನ್ನು ತನ್ನ ಹಾದಿಯಲ್ಲಿ ಎಳೆದುಕೊಂಡು ಮಾನ್ಸೂನ್ ಹರಿವು ದುರ್ಬಲಗೊಳ್ಳಲು ಕಾರಣವಾಯಿತು ಎಂದು ಹೇಳಿದ್ದರು. ಚಂಡಮಾರುತವು ಚದುರಿದ ನಂತರ ಮಾನ್ಸೂನ್ ಹರಿವು ಸರಿಯಾಗಿ ಪುನರಾರಂಭಗೊಳ್ಳುವ ನಿರೀಕ್ಷೆಯಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror