ಮುಂಗಾರು ವಿಳಂಬ ಹಿನ್ನೆಲೆ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಕಷ್ಟ: ಮೋಡ ಬಿತ್ತನೆಗೆ ಕಾದು ನೋಡುವ ತಂತ್ರ

June 13, 2023
12:58 PM

ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ  ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ.  ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.

ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಎಫ್​ಆರ್​​ಪಿ ದರ ಕೇಂದ್ರದಿಂದಲೇ‌ ಜಾರಿ ಆಗುತ್ತಿದೆ. ನಾವೇನೆನೋ ಚಿಂತನೆ ಮಾಡುತ್ತೇವೆ, ಇದಕ್ಕೆ ಸ್ವಲ್ಪ ಸಮಯ ಕೊಡಬೇಕು. ಕಾಲಾವಕಾಶ ತಗೆದುಕೊಂಡು ಎಲ್ಲವನ್ನೂ ಸರಿ ಮಾಡುತ್ತೇವೆ ಎಂದರು. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರೈತವಿರೋಧಿ ಮೂರು ಕಾಯ್ದೆಗಳ ಕುರಿತು ಚರ್ಚಿಸಿ ಪರಿಶೀಲನೆ ಮಾಡುತ್ತೇವೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror