ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

May 18, 2025
2:42 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು ವೇಗ ನೀಡುವ ಸಾಧ್ಯತೆಗಳಿವೆ.

19.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಈಗಾಗಲೇ ಮುಂಜಾನೆ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದ್ದು, ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿಯೂ ಮೇ 19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.  ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದ್ದು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು ವೇಗ ನೀಡುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror