19.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಈಗಾಗಲೇ ಮುಂಜಾನೆ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದ್ದು, ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿಯೂ ಮೇ 19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದ್ದು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು ವೇಗ ನೀಡುವ ಸಾಧ್ಯತೆಗಳಿವೆ.
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…
ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…