#Drought | ಕೈ ಕೊಟ್ಟ ಮುಂಗಾರು | ರಾಜ್ಯದ 28 ಜಿಲ್ಲೆಗಳಲ್ಲಿ ಮಳೆ ಕೊರತೆ | ಕೇವಲ 26% ಮಾತ್ರ ಬಿತ್ತನೆ

July 16, 2023
11:25 AM
ರಾಜ್ಯಾದ್ಯಂತ ಮುಂಗಾರು ಕೊರತೆ, ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ, 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ

ದಿನ ಕಳೆದಂತೆ ಮುಂಗಾರು ಕಳೆಗಟ್ಟುವುದಕ್ಕಿಂತ ಕಳೆ ಗುಂದುವ ಲಕ್ಷಣಗಳೇ ಕಾಣಿಸುತ್ತಿದೆ. ರಾಜ್ಯಕ್ಕೆ ಮಳೆ#Rain ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು#Farmers ಕಂಗಾಲಾಗಿದ್ದಾರೆ.

Advertisement
ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ. ಬಾಗಲಕೋಟೆ#Bagalkot ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

ಇನ್ನೂ ಕೊಡಗು#Kodagu ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 80% ಮಳೆ ಕೊರತೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ವಾಡಿಕೆಯ ಅರ್ಧದಷ್ಟೂ ಬಿತ್ತನೆ ಮಾಡಿಲ್ಲ. ಈವರೆಗೆ ರಾಜ್ಯದಲ್ಲಿ ಬಿತ್ತನೆ ಆಗಿರೋದು 26% ಮಾತ್ರ. ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ.

ಕಡಿಮೆ ಬಿತ್ತನೆ ಮಾಡಿರುವ ರಾಜ್ಯದ ಟಾಪ್ 5 ಜಿಲ್ಲೆಗಳು
ಬೆಂಗಳೂರು ಗ್ರಾಮಾಂತರ- 2%
ರಾಮನಗರ – 2%
ಕೋಲಾರ – 4%
ಬಳ್ಳಾರಿ – 5%
ಕೊಡಗು – 7%
ತುಮಕೂರು – 9% 

ಕೃಪೆ : ಅಂತರ್ಜಾಲ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group