ಈ ಬಾರಿ ಮುಂಗಾರು ಕೈ ಕೊಟ್ಟಿತ್ತು. ಆದರೆ ಕಳೆದ 3-4 ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಸೇರಿದಂತೆ ಭಾರಿ ಮಳೆಯಾದ ಹಿನ್ನೆಲೆ ಚಾರ್ಮಾಡಿ ಘಾಟಿಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಮರ ಬಿದ್ದ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.
ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆ ಸ್ಥಳೀಯರು ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ದೇವರು ಮನೆ, ಬಾಳೂರು, ಮೂಡಿಗೆರೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಭಾರೀ ಮಳೆ ಜೊತೆ ರಣಗಾಳಿ ಬೀಸಿದ್ದು, ಭಾರೀ ಗಾಳಿ-ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ತಂತಿ ಮೇಲೆ ಮರ ಬಿದ್ದ ಪರಿಣಾಮ ಮಲೆನಾಡ ಕೆಲವು ಗ್ರಾಮೀಣ ಭಾಗದಲ್ಲಿ ಕತ್ತಲು ಆವರಿಸಿದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…