ಮುಂಗಾರು ಚುರುಕು | ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ | ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

June 26, 2024
1:00 PM

ಕಾವೇರಿ ಜಲಾನಯನ(cauvery belt) ಪ್ರದೇಶದಲ್ಲಿ ಮುಂಗಾರು (Monsoon) ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವಿನಲ್ಲಿ‌ ಹೆಚ್ಚಳವಾಗಿದೆ. ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯಾಗುತ್ತಿದೆ. ಸ್ವಲ್ಪ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಹೀಗಾಗಿ ಒಳಹರಿವಿನ(Inflow) ಪ್ರಮಾಣ ಹೆಚ್ಚಾಗಿದೆ.  ಇದೇ ವೇಳೆ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ದುರ್ಮರಣಕ್ಕೀಡಾದ (Death) ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ಮೃತರನ್ನು ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

Advertisement

ಕೆಆರ್‌ಎಸ್ ಡ್ಯಾಂ ಒಳಹರಿವಿನ ಪ್ರಮಾಣ 2,241 ಕ್ಯೂಸೆಕ್ ಇದೆ. ನಿನ್ನೆಗಿಂತ ಇಂದು ಒಳಹರಿವಿನಲ್ಲಿ 1,000 ಕ್ಯೂಸೆಕ್ ಹೆಚ್ಚಳವಾಗಿದೆ.  124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 87.90 ಅಡಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್‌ಎಸ್‌ನಲ್ಲಿ 14.724 ಟಿಎಂಸಿ ನೀರು ಸಂಗ್ರಹವಾಗಿದೆ. ಕೆಆರ್‌ಎಸ್ ಡ್ಯಾಂನ ಒಳಹರಿವು 2,241 ಕ್ಯೂಸೆಕ್ ಹಾಗೂ ಡ್ಯಾಂನ ಹೊರ ಹರಿವು 986 ಕ್ಯೂಸೆಕ್‌ ಇದೆ.

ಸೋಮವಾರ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಮನೆಯೊಳಗಿದ್ದ ನಾಲ್ವರು ಮೃತಟ್ಟಿದ್ದಾರೆ. ಸದ್ಯ ಮೂವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-04-2025 | ಕೆಲವೆಡೆ ಇಂದೂ ಮಳೆ ನಿರೀಕ್ಷೆ | ಎ.9 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ |
April 7, 2025
2:11 PM
by: ಸಾಯಿಶೇಖರ್ ಕರಿಕಳ
ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |
April 7, 2025
12:27 PM
by: ವಿಶೇಷ ಪ್ರತಿನಿಧಿ
ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ
April 7, 2025
6:44 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್
April 7, 2025
6:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group