04.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಅಕ್ಟೊಬರ್ 4ರಿಂದ ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿದ್ದು, ಅಕ್ಟೊಬರ್ 10 ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 4 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿದ್ದು, ಅಕ್ಟೊಬರ್ 8 ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಡ ಸಹಿತ), ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕೆಲವು ಭಾಗಗಳಲ್ಲಿ ಸಾಮಾನ್ಯ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ ಪ್ರಮಾಣದ ಗಾಳಿ ಹಾಗೂ ಅಧಿಕ ತಾಪಮಾನದ ಕಾರಣದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಸೃಷ್ಠಿಯಾಗಿದೆ. ಹಿಂಗಾರು ಆರಂಭ ವಿಳಂಬವಾಗಲಿದೆ.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…