ಹವಾಮಾನ ವರದಿ | 19-10-2024 | ಅ.24 ವರೆಗೆ ಹಿಂಗಾರು ಮಳೆ ಮುಂದುವರಿಯುವ ಲಕ್ಷಣ |

October 19, 2024
1:05 PM
ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.

20.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಆದರೆ ಕಡಲತೀರ ಭಾಗಗಳಲ್ಲಿ ಕಡಿಮೆ ಇದ್ದರೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ರಾಯಚೂರು ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಜಾಸ್ತಿ ಇರಬಹುದು) ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸುತ್ತಿದ್ದು, ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಿ ಹಿಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ. ಅಕ್ಟೊಬರ್ 21ರಂದು ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಅದು ಪ್ರಭಲ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಅಕ್ಟೊಬರ್ 24 ಅಥವಾ 25ರಂದು ಒಡಿಸ್ಸಾ ಅಥವಾ ಪಶ್ಚಿಮ ಬಂಗಾಳ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಬೆಳೆಗಾರರ ಹಿತ ಕಾಯಲು ಸರ್ಕಾರದ ಗಮನ ಸೆಳೆದ ಶಾಸಕ ಭೀಮಣ್ಣ ನಾಯ್ಕ್
November 29, 2026
10:21 AM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ – ಡಿಸೆಂಬರ್ ಆರಂಭದಲ್ಲಿ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ?
November 29, 2026
9:57 AM
by: ದ ರೂರಲ್ ಮಿರರ್.ಕಾಂ
ಹಾಲು ಮಾರಾಟದ ಹಣದ ಜತೆಗೆ ಪ್ರೋತ್ಸಾಹಧನವೂ ಸಕಾಲಕ್ಕೆ ಸಿಗಲಿ – ಹೈನುಗಾರರ ನಿರೀಕ್ಷೆ
November 28, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-11-2026 | ಡಿಸೆಂಬರ್ ಮೊದಲ ವಾರ ಮೋಡದ ವಾತಾವರಣ ಹೆಚ್ಚಳದ ಸಾಧ್ಯತೆ
November 28, 2026
1:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror