Advertisement
ವೆದರ್ ಮಿರರ್

ಹವಾಮಾನ ವರದಿ | 19-10-2024 | ಅ.24 ವರೆಗೆ ಹಿಂಗಾರು ಮಳೆ ಮುಂದುವರಿಯುವ ಲಕ್ಷಣ |

Share

20.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಆದರೆ ಕಡಲತೀರ ಭಾಗಗಳಲ್ಲಿ ಕಡಿಮೆ ಇದ್ದರೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ರಾಯಚೂರು ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಜಾಸ್ತಿ ಇರಬಹುದು) ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅಕ್ಟೊಬರ್ 24ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸುತ್ತಿದ್ದು, ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಿ ಹಿಂಗಾರು ಮಾರುತಗಳು ಪ್ರಭಲಗೊಳ್ಳುತ್ತಿವೆ. ಅಕ್ಟೊಬರ್ 21ರಂದು ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಅದು ಪ್ರಭಲ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಅಕ್ಟೊಬರ್ 24 ಅಥವಾ 25ರಂದು ಒಡಿಸ್ಸಾ ಅಥವಾ ಪಶ್ಚಿಮ ಬಂಗಾಳ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

6 hours ago

ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು

ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…

7 hours ago

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ

ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…

7 hours ago

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…

12 hours ago

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

16 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

16 hours ago