ಈ ಬಾರಿ ಮುಂಗಾರು(Mansoon) ಬೇಗನೆ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ ಈ ಬಾರಿ ಹವಾಮಾನ ವರವಾಗುವ ಸುಳಿವು ಸಿಕ್ಕಿದೆ. ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ (Monsoon Rain) ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 19ರಂದು ನೈರುತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್, ಬಂಗಾಳಕೊಲ್ಲಿಯ ಆಗ್ನೇಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದ್ದು, ಮೇ 31ಕ್ಕೆ ಮೊದಲಿಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿದೆ. ಈ ದಿನಾಂಕದಿಂದ ಮೂರ್ನಾಲ್ಕು ದಿನ ಮುಂಚಿತವಾಗಿಯೂ ಅಥವಾ ನಂತರ ಮುಂಗಾರು ಬರುವ ಸಾಧ್ಯತೆಯಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಎಂಟ್ರಿ ಕೊಡಲಿದೆ. ಜೂನ್ 7 ಅಥವಾ 8 ರಂದು ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
Source : IMD
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel