Advertisement
ವೆದರ್ ಮಿರರ್

ಹವಾಮಾನ ವರದಿ | 25-10-2024 | ಗುಡುಗು ಸಹಿತ ತುಂತುರು ಮಳೆ | ಹಿಂಗಾರು ಮಳೆ ಮತ್ತೆ ಚುರುಕು ಸಾಧ್ಯತೆ |

Share

26.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ, ಅಕ್ಟೊಬರ್ 30ರ ತನಕ ಮಳೆ ಕಡಿಮೆಯಾದರೂ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸೀಮಿತ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ನಂತರ ಮತ್ತೆ ಗುಡುಗು ಮಳೆ ಪ್ರಾರಂಭವಾಗುವ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 28ರಿಂದ ಮೋಡ ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಪ್ರಾರಂಭವಾಗಿ ಅಕ್ಟೊಬರ್ 31ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರಿನ ದಕ್ಷಿಣ ಭಾಗಗಳಲ್ಲಿ ಹಾಗೂ ಚಾಮರಾಜನಗರದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಡಾನಾ ಚಂಡಮಾರುತದ ಪ್ರಭಾವದಿಂದ ಈಗ ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಕಾರಣದಿಂದ ಉತ್ತರ ಒಳನಾಡಿನಲ್ಲಿ ಒಣ ಹವೆ ಉಂಟಾಗಿದ್ದು, ಇದು ತಾತ್ಕಾಲಿಕವಾಗಿರಬಹುದು.

ಈ ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೆ, ಅಂದರೆ ಸುಮಾರು ಅಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

7 minutes ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

16 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago