Advertisement
ವೆದರ್ ಮಿರರ್

ಹವಾಮಾನ ವರದಿ | 02-09-2025 | ಬದಲಾದ ಹವಾಮಾನ – ಭಾರೀ ಮಳೆಯ ನಿರೀಕ್ಷೆ ಏನಾಯ್ತು..?

Share

03.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಬಿಡುವಿನ ಅಂತರ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಭಾರಿ ಮಳೆಯ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಬಿಟ್ಟು ಬಿಟ್ಟು ಸಾಮಾನ್ಯ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಮಲೆನಾಡು ಭಾಗಗಳಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಸೆಪ್ಟೆಂಬರ್ 7ರ ತನಕ ಬಿಸಿಲಿನೊಂದಿಗೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ
ಇದೆ. ದಾವಣಗೆರೆ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.  ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲೇ ಶಿಥಿಲಗೊಳ್ಳುವ ಲಕ್ಷಣವಿರುವುದರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…

4 hours ago

ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…

6 hours ago

ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ

ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…

15 hours ago

ಕಾಡಿನ ನಡಿಗೆ – ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಚೈತನ್ಯ..!

ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…

17 hours ago

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ – ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ

ಉತ್ತರ ಭಾರತದಿಂದ ಶುಷ್ಕ ಗಾಳಿ ಬೀಸುವ ಸಾಧ್ಯತೆ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಬಹುದಾದ ವಾಯುಮಂಡಲದ…

18 hours ago

ಜಲಾಶಯಗಳಲ್ಲಿ ನೀರಿನ ಕೊರತೆ – ಐದು ಜಿಲ್ಲೆಗಳ ಹಿಂಗಾರು ಬೆಳೆಗಳಿಗೆ ಕಾಲುವೆ ನೀರು ಇಲ್ಲ

ಮುಂಗಾರು ಮಳೆಯ ಕೊರತೆಯಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿರುವ…

18 hours ago