Advertisement
ಪ್ರಮುಖ

#RainAlert| ಉತ್ತರದಿಂದ ದಕ್ಷಿಣಕ್ಕೂ ಸಾಗಿದ ಮುಂಗಾರು ಅವಾಂತರ | ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

Share

ಕಳೆದ ಹತ್ತು ದಿನಗಳಿಂದ ಉತ್ತರ ಭಾರತದಲ್ಲಿ ಭಾರಿ ಅವಾಂತರ ಸೃಷ್ಟಿಸುತ್ತಿರುವ ವರುಣ ಈಗ ದಕ್ಷಿಣದ ಕಡೆ ತನ್ನ ಪ್ರತಾಪ ತೋರುತ್ತಿದೆ. ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟು ಮಾಡಿದ ಬಳಿಕ ಎಡೆಬಿಡದೆ ಸುರಿಯುತ್ತಿರುವ ಮಳೆ#Rain ದಕ್ಷಿಣ ಭಾರತಕ್ಕೂ ವ್ಯಾಪಿಸಿದೆ. ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್#Red Alert ಅನ್ನು ಘೋಷಿಸಲಾಗಿದೆ.

ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಹೈದರಾಬಾದ್‌ನಲ್ಲಿ ಟ್ರಾಫಿಕ್ ಜಾಮ್ ಅನ್ನು ತಡೆಗಟ್ಟುವ ಸಲುವಾಗಿ ಐಟಿ ಕಂಪನಿಗಳಿಗೆ ಉದ್ಯೋಗಿಗಳು ಹಂತ ಹಂತವಾಗಿ ಕೆಲಸದಿಂದ ಮರಳುವಂತೆ ಮಾಡಲು ಪೊಲೀಸರು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹವಾಮಾನ ಇಲಾಖೆಯು ಕರಾವಳಿ ಪ್ರದೇಶಗಳಲ್ಲಿನ ಜನರು ಜಲಾವೃತಕ್ಕೆ ಒಳಗಾಗುವ ಪ್ರದೇಶಗಳಿಂದ ದೂರ ಉಳಿಯುವಂತೆ ಕೇಳಿಕೊಂಡಿದೆ. ನಿರಂತರ ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಕಟ್ಟಡ ಹಾಗೂ ರಸ್ತೆಗಳಿಂದ ದೂರವಿರಲು ತಿಳಿಸಿದೆ. ಹಾಗೇ ಅಧಿಕ ಮಳೆ ಇರುವ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

14 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

14 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

14 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

22 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago